ಈ ಬಾರಿ 70 ಮಂದಿಗೆ ರಾಜ್ಯೋತ್ಸವ ಪುರಸ್ಕಾರ; ಗಣ್ಯರ ಪಟ್ಟಿ ಹೀಗಿದೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು ಈ ಬಾರಿಗೆ ಗೌರವಕ್ಕೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

Related posts