ಉಡುಪಿ ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ; ಸರ್ಕಾರದ ಆದೇಶ

ಬೆಂಗಳೂರು: ಉಡುಪಿಯಖಾಸಗಿ ಕಾಲೇಜಿನಲ್ಲಿ ವಿವಾದಿತ ವಿಡಿಯೋ ರೆಕಾರ್ಡ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts