ಉತ್ತರಕಾಶಿ: ಭೂಕುಸಿತಕ್ಕೊಳಗಾಗಿ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ಸಿನ ಹಂತದಲ್ಲಿದ್ದು, ಶುಕ್ರವಾರದೊಳಗೆ ಎಲ್ಲರನ್ನೂ ಸುರಂಗದಿಂದ ಹೊರತರಬಹುದೆಂದು ಅಧಿಕಾರಿಗಳು ಹೇಳಿದ್ದಾರೆ.
ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಬಿರುಸಿನಿಂದ ಸಾಗಿದ್ದು, ಗುರುವಾರ ಮುಂಜಾನೆ ಕಾರ್ಮಿಕರಿರು ಇರುವ ಸ್ಥಳಕ್ಕೆ ಸಮೀಪವೆಂಬಂತೆ ತಲುಪಲಾಗಿದೆ. ಕೊನೆಯ ಪೈಪ್ ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕರನ್ನು ಸ್ಥಳಾಂತರಿಸಿದ ನಂತರ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೂ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸುರಂಗದಿಂದ ಹೊರತರುವ ಕಾರ್ಮಿಕರನ್ನು ತಕ್ಷಣಕ್ಕೆ ಚಿಕಿತ್ಸೆಗೆ ಕರೆದೊಯ್ಯಲು 41 ಆಂಬ್ಯುಲೆನ್ಸ್‌ಗಳನ್ನು ಸಜ್ಜುಗೊಳಿಸಲಾಗಿದೆ. ಹಾಗೂ ಅಗತ್ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಬಳಕೆಗೂ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಪ್ರತ್ಯೇಕ ವಾರ್ಡನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.