ಬೆಂಗಳೂರು: ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಪಕ್ಷದಲ್ಲಿ ವಿಜಯೋತ್ಸವ ಸಂಭ್ರಮ ಮನೆಮಾಡಿದೆ. ಆದರೆ ಇದು ‘ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್,ಅಶೋಕ್, ಈ ಉಪಚುನಾವಣೆ ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ. ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಅನವಶ್ಯಕವಾಗಿ ಬೀಗುತ್ತಿದೆ ಎಂದು ಬಣ್ಣಿಸಿದರು.
ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋತಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಒಪ್ಪುವುದಿಲ್ಲ. ಕಾಂಗ್ರೆಸ್‌ಗೆ ಅಭ್ಯರ್ಥಿಯ ಗತಿ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿದ್ದವರನ್ನು ಕರೆಸಿಕೊಳ್ಳಲಾಗಿದೆ. ಈ ಸೋಲಿನಿಂದ ಬಿಜೆಪಿಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ಇದು ಬಿಜೆಪಿಗೆ ಮಾನದಂಡವೂ ಅಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಈ ಸೋಲನ್ನೇ ಗೆಲುವಾಗಿ ಪರಿವರ್ತಿಸಲಾಗುವುದು ಎಂದವರು ಹೇಳಿದರು.