ಹಾವೇರಿ: ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಬೈಕ್ ಸವಾರರಾದ ಶಶಿಕುಮಾರ್ ಉಪ್ಪಾರ, ದರ್ಶನ್ ಮತ್ತು ಆಕಾಶ್ ಬಿರಾದಾರ ಎಂದು ಗುರುತಿಸಲಾಗಿದೆ. ಮೈಲಾರ ಜಾತ್ರೆಗೆ ಈ ಯುವಕರು ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎತ್ತಿನಬಂಡಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಣೆಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಪರಿಶೆಲನೆ ನಡೆಸಿದ್ದಾರೆ.