ಒಂದು ವಾರ ಕಾಲ ವರ್ಷಾಧಾರರೆ: ಕರಾವಳಿ–ಮಲೆನಾಡಲ್ಲಿ ಭಾರೀ ಮಳೆ ಸಾಧ್ಯತೆ

ಗಳೂರು: ಮುಂದಿನ ಏಳು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬುಧವಾರ ಬಿಡುಗಡೆ ಮಾಡಿದ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Related posts