ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

ಹೈದರಾಬಾದ್‌: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ಕಂಪನಿಯ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸ್ಥಳದಲ್ಲೇ ಸಾವನ್ನಪಿದರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದ ಹಿನ್ನೆಲೆ ಇದಾಗಿದ್ದು, ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಪಡೆ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು.

ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Related posts