ಕನ್ನಡದಲ್ಲೇ ರಾಜ್ಯೋತ್ಸವ ಶುಭ ಹಾರೈಸಿದ ಮೋದಿ

ನವದೆಹಲಿ: ಕರುನಾಡು ಮಾತ್ರವಲ್ಲ ಎಲ್ಲೆಡೆ ಕನ್ನಡಿಗರು ರಾಜ್ಯೋತ್ಸವ ಸಡಗರದಲ್ಲಿ ಇದ್ದಾರೆ. ಎಲ್ಲೆಲ್ಲೂ ಕನ್ನಡಮ್ಮನ ಉತ್ಸವ ಸಾಗಿದೆ. ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಲ್ಲೇ ಕನ್ನಡಿಗರಿಗೆ ಶುಭ ಹಾರಿಸಿ ಗಮನಸೆಳೆದಿದ್ದಾರೆ.
‘ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿದ್ದಾರೆ.

Related posts