ಮಂಗಳೂರು: ಬಂದರು ನಗರ ಹೊರವಲಯದ ಸುರತ್ಕಲ್ ಬಳಿ ಟೋಲ್ ಸಂಗ್ರಹಕ್ಕೆ ಬ್ರೇಕ್ ಬೀಳಲಿದೆ. ಈ ಸಂಬಂಧ ಕರಾವಳಿ ಜನರ ಆಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂಧಿಸಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದ ಸಮರ್ಪಿಸಿದ್ದಾರೆ.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ಮೂಲಕ ನಳಿನ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022