ಕರ್ನಾಟಕಕ್ಕೆ ಅನುದಾನ; ಕೇಂದ್ರದಿಂದ ಹಣ ಬಿಡುಗಡೆಯ ಭರವಸೆ

ಬೆಂಗಳೂರು: ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಸರ್ಕಾರ ಕೇಂದ್ರದ ಗಮನಸೆಳೆದಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕರ್ನಾಟಕಕ್ಕೆ ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಗಮನಸೆಳೆದಿದೆರಲ್ಲದೆ, ತಮ್ಮ ರಾಜ್ಯಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚುವುದರಲ್ಲಿ ಕರ್ನಾಟಕಕ್ಕೆ ನ್ಯಾಯವಾದ ಪಾಲು ನೀಡುತ್ತಿಲ್ಲ. ರಾಜಕೀಯ ಕಾರಣಗಳಿಗಾಗಿ ಅನುದಾನವನ್ನು ಕಡಿತಗೊಳಿಸುವುದು ಸರಿಯಲ್ಲ ಎಂದರು. ಅನುದಾನ ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದರು.

ಇದೇ ವೇಳೆ, ಯಾವುದೇ ವಿಳಂಬವಿಲ್ಲದೆ ಹಣ ನೀಡಲಿದ್ದು, ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

Related posts