ಕರ್ನಾಟಕದ ಜಮೀನಿನ ಮೇಲೆ ಕೇರಳ ಸರ್ಕಾರದ ಅಧಿಕಾರವಿದೆಯೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕೋಗಿಲು ಒತ್ತುವರಿ ತೆರವು ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಸವಾಗಿ ಪರಿಣಮಿಸಿದೆ. ಹೈಕಮಾಂಡ್ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಒತ್ತುವರಿ ತೆರವಿನಿಂದ ಸಂತ್ರಸ್ತರಾದವರಿಗೆ ಪರ್ಯಾಯ ವಸತಿ ನಿರ್ಮಿಸಿಕೊಡಲು ತಯಾರಿ ನಡೆಸಿದೆ. ಸರ್ಕಾರದ ಈ ನಡೆ ಪ್ರತಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ರಾಜ್ಯ ಸರ್ಕಾರದ ಈ ನಡೆಯನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ಕರ್ನಾಟಕವನ್ನು ಕೇರಳ ಸರ್ಕಾರ ಆಳ್ವಿಕೆ ಮಾಡುತ್ತಿದೆಯೇ ? ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ವೇಣುಗೋಪಾಲ್‌ ನಡೆಸುತ್ತಿದ್ದಾರೆಯೇ? ಕರ್ನಾಟಕದ ಜಮೀನಿನ ಮೇಲೆ ಕೇರಳ ಸರ್ಕಾರದ ಅಧಿಕಾರವಿದೆಯೇ?’ ಎಂದು ಪ್ರಶ್ನಿಸಿದ್ದಾರೆ.

ಕೇರಳದ ನಿಯೋಗ ರಾಜ್ಯದ ವಿಷಯದಲ್ಲಿ ವರದಿ ಕೇಳುವಂತಾಗಿದೆ ಎಂದರೆ ಕರ್ನಾಟಕದ ನೆಲ, ಜಲದ ಮೇಲೆ ಕಾಳಜಿ ಇಲ್ಲದಿರುವ ನಾಡದ್ರೋಹಿ
ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದವರು ಆಕ್ರೋಶ ಹೊರಹಾಕಿದ್ದಾರೆ.

Related posts