ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಸರ್ಕಾರಕ್ಕೆ 6ನೇ ವರದಿಯನ್ನು ಸಲ್ಲಿಸಿದೆ.
ಎರಡನೇ ಆಡಳಿತ ಸುಧಾರಣಾ ಆಯೋಗವು ಶನಿವಾರ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದು ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಪ್ರಮುಖವಾಗಿ ಹೆಚ್ಚಿನ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಶಿಫಾರಸು ಮಾಡಿದೆ ಎನ್ನಲಾಗಿದೆ.
ಬಹುತೇಕ ಇಲಾಖೆಗಳಲ್ಲಿ HRMS, ಖಜಾನೆ-2, e-office, e-PAR ಮತ್ತು ಇ-ಸೇವಾವಹಿಗಳನ್ನು ಅಳವಡಿಸಿರುವುದರಿಂದ ಲಿಪಿಕ ಕೆಲಸವು ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ನೇಮಕಾತಿ ಕಡಿತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ.
ಹೆಚ್ಚಿನ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಮುಂದುವರಿಸುವ ಅಗತ್ಯವಿಲ್ಲ. ಪ್ರತಿ ಇಲಾಖೆಯಲ್ಲಿ ಈ ಹುದ್ದೆಗಳನ್ನು ಪರಿಶೀಲಿಸಿ ಮರುವ್ಯವಸ್ಥೆ ಮಾಡಬಹುದು ಅಥವಾ ತಾಂತ್ರಿಕ ಹುದ್ದೆಗಳನ್ನಾಗಿ ಪರಿವರ್ತಿಸಬಹುದು ಎಂದು ಆಯೋಗ ಹೇಳಿದೆ.