ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ.

ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Related posts