ಕಾಂಗ್ರೆಸ್‌ ವಿದ್ಯಮಾನ; ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿನ ಡಿನ್ನರ್ ಪಾರ್ಟಿ ಸಂಚಲನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಸೋಮವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ (ಸಿಎಲ್‌ಪಿ) ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದು ಪಕ್ಷದ ಎಲ್ಲಾ ಶಾಸಕರು, ಸಂಸದರಿಗೆ ಸೂಚನೆ ರವಾನಿಸಿದ್ದಾರೆ. ಜನವರಿ13ರಂದು ಸಂಜೆ 6ಕ್ಕೆ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್‌ ಈ ಸೂಚನೆ ರವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್ತಿನ ಸಭಾನಾಯಕ ಎನ್‌.ಎಸ್‌. ಬೋಸರಾಜು ಜಾಗೂ ಪಕ್ಷದ ಎಲ್ಲ ಕಾರ್ಯಾಧ್ಯಕ್ಷರು ಈ ಸಿಎಲ್‌ಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಲೋಕಸಭೆ- ರಾಜ್ಯಸಭೆಯ ಸದಸ್ಯರು ಹಾಗೂ ಬಾಹ್ಯ ಬೆಂಬಲಿತರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ಆಹ್ವಾನ ನೀಡಿದ್ದಾರೆ..

Related posts