ಬೆಂಗಳೂರು: ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತ ಕುರಿತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ವರದಿಯನ್ನು ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು 11 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅವಘಡದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕ ಸದಸ್ಯ ಆಯೋಗವು ಎರಡು ಸಂಪುಟಗಳಲ್ಲಿ ವರದಿ ಸಲ್ಲಿಸಿದೆ.
ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ವರದಿ ಈಗಷ್ಟೇ ಸಲ್ಲಿಕೆಯಾಗಿರುವುದರಿಂದವರದಿಯನ್ನು ಪೂರ್ಣವಾಗಿ ಓದಿಲ್ಲ. ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ಈ ವರದಿಯನ್ನು ಮಂಡಿಸಿ, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು 11 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅವಘಡದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕ ಸದಸ್ಯ ಆಯೋಗವು ಇಂದು ಎರಡು ಸಂಪುಟಗಳಲ್ಲಿ ವರದಿ ಸಲ್ಲಿಸಿದೆ.
ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ… pic.twitter.com/KMCdUOhLgt
— CM of Karnataka (@CMofKarnataka) July 11, 2025