ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

Related posts