ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.
ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಆರು ತಿಂಗಳ ಹಿಂದೆ ನಟ ದರ್ಶನ ಹಾಗೂ ಇತರ ಆರೋಪಿಗಳೊಂದಿಗೆ ಜೈಲು ಸೇರಿದ್ದ ಪವಿತ್ರಾ ಗೌಡ ಇದೀಗ ಬಂಧಮುಕ್ತರಾಗಿದ್ದಾರೆ.