ಖಾಸಗಿ ಸಂಸ್ಥೆಗಳು ಮತದಾರರ ಸಮೀಕ್ಷೆ ನಡೆಸುವಂತಿಲ್ಲ: ಆದೇಶ ಪ್ರಕಟ

ಬೆಂಗಳೂರು: ಖಾಸಗಿ ಸಂಸ್ಥೆಗಳ ಸಮೀಕ್ಷೆಗರ ಬ್ರೇಕ್ ಬಿದ್ದಿದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 23/KT/2022, ದಿನಾಂಕ:16.12.2022ರ ಪತ್ರದಲ್ಲಿನ ನಿರ್ದೇನದಂತೆ ಯಾವುದೇ ಖಾಸಗಿ ಸಂಸ್ಥೆಗಳು ಮನೆ ಮನೆ ಸಮೀಕ್ಷೆ ನಡೆಸಿ ಸಂಭವನೀಯ ದತ್ತಾಂಶ ಸಂಗ್ರಹಣೆ, ಗುರುತಿನ ಚೀಟಿಗಳ ದುರ್ಬಳಕೆ ಆಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು, ಯಾವುದೇ ಖಾಸಗಿ ಹಾಗೂ ಇನ್ನಿತರೆ ಸಂಸ್ಥೆಗಳು ಮತದಾರರ ದತ್ತಾಂಶವನ್ನು ಸಂಗ್ರಹಿಸುವ ಪ್ರಯತ್ನ ನಡೆಸುವ ಸಂಬಂಧ ಸದರಿ ಸಂಸ್ಥೆಗಳಿಗೆ ದೃಢೀಕರಣ/ನಿರಾಕ್ಷೇಪಣ ಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು/ಮತದಾರರ ನೊಂದಣಾಧಿಕಾರಿಗಳು ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಅದರಂತೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾರರ ನೊಂದಣಾಧಿಕಾರಿಗಳು ಕಡ್ಡಾಯವಾಗಿ ಸದರಿ ಆದೇಶವನ್ನು ಪಾಲಿಸಲು ನಿರ್ದೇಶಿಸಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯವು ಚಾಲ್ತಿಯಲ್ಲಿದ್ದು 17.12.2022 ರವರೆಗೆ ಶೇ. 86.55 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts