ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಕುರಿತ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರದ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಉಸ್ತುವಾರಿ ವಹಿಸಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಚ್ಚರಿಗೆ ಕಾರಣವಾಗಿದೆ.