ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಸಹಕಾರ ಸಂಘಗಳ ಸ್ಥಾಪನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ಕೈಗೊಂಡಿರುವ ಈ ಕ್ರಮದಡಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದು, ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಸಂಘಗಳ ಪ್ರಮುಖ ಉದ್ದೇಶವಾಗಲಿದೆ.

“ಗೃಹಲಕ್ಷ್ಮಿಯರಿಗೆ ಆರ್ಥಿಕ ಬಲ – ಸ್ವ ಉದ್ಯೋಗಕ್ಕೆ ಬೆಂಬಲ” ಎಂಬ ಆಶಯದೊಂದಿಗೆ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣದ ನವ ಅಧ್ಯಾಯವನ್ನು ಆರಂಭಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

Related posts