‘ಗ್ರೇಟರ್ ಬೆಂಗಳೂರು’: ಉದ್ಯಾನಗರಿ ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರ ಮನ್ನಣೆ ನೀಡಿದೆ. ಬೆಂಗಳೂರು ಸುತ್ತಮುತ್ತಲ ಮಾಗಡಿ, ಬಿಡದಿ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಪ್ರದೇಶಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೈರಮಂಗಲ, ಬಿಡದಿ ಹೋಬಳಿಯ ಬನ್ನಿಗೆರೆ, ಹೊಸೂರು, ಕೆಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಲುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕವಲು, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಈ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಬರಲಿದೆ.
ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪಗ್ರಹ ಪಟ್ಟಣಗಳಾಗಿ ಅಭಿವೃದ್ಧಿಪಡಿಸಲಾಗುವುದು ಈ ಯೋಜನೆಯ ಭಾಗವಾಗಿದೆ ಎಂದವರು ವಿವರಿಸಿದ್ದಾರೆ.

Related posts