ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ.

Related posts