ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಪ್ರಕಟಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
– ಮುಖ್ಯಮಂತ್ರಿ @siddaramaiah #Chikballapura #Accident pic.twitter.com/GLLPlUAQiu— CM of Karnataka (@CMofKarnataka) October 26, 2023