ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರ ಹತ್ಯೆಯಾಗಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿವೆ. ಆ ವೇಳೆ ಎನ್ಕೌಂಟರ್ನಲ್ಲಿ 31 ನಕ್ಸಲರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.