ಛತ್ತೀಸ್‌ಗಢದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ; ಎನ್ಕೌಂಟರ್’ನಲ್ಲಿ 16 ಬಲಿ

ಸುಕ್ಮಾ: ಛತ್ತೀಸ್‌ಗಢದಲ್ಲಿ ನಕ್ಸಲ್ ಹಾವಳಿ ವಿರುದ್ಧ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದೆ. ಸುಕ್ಮಾ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 16 ನಕ್ಸಲರು ಬಲಿಯಾಗಿದ್ದಾರೆ.

ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಶನಿವಾರ ಮುಂಜಾನೆ ಈ ಎನ್‌ಕೌಂಟರ್‌ ನಡೆದಿದ್ದು ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಮೀಸಲು ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts