ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆ ಬೋನಿಗೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಕೆಲವು ದಿನಗಳಿಂದ ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ.

ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ, ಕಲ್ಲುಕೋಟೆ ಅರಣ್ಯ ಪ್ರದೇಶಗಳಲ್ಲಿ ತಿರುಗಾಡುತ್ತಿದ್ದ ಚಿರತೆ ಮೇಲಿನ ಜೂಗಾನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ‌ ಮಾಡಿ ಎರಡು ಹಸುಗಳನ್ನು ಕೊಂದಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ.

ಗ್ರಾಮಗಳಲ್ಲಿ ಹಾಡಹಗಲೇ ಚಿರತೆ ದಾಳಿಯಿಂದ ಜನ ಭಯಭೀತರಾಗಿದ್ದರು. ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಹಿರೇಮುದ್ದೇನಹಳ್ಳಿಯಲ್ಲಿ ಬೋನಿನ ಒಳಗೆ ನಾಯಿ ಕಟ್ಟಿ ಇರಿಸಿದ್ದರು.

ಬುಧವಾರ ರಾತ್ರಿ ನಾಯಿ ತಿನ್ನಲು ಬಂದು ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿರಾಳರಾಗಿದ್ದಾರೆ.

Related posts