ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮ ನುಸುಳುವಿಕೆಗೆ ಸೇನೆ ಬ್ರೇಕ್ ಹಾಕಿದೆ. ಪೂಂಚ್ ಜಿಲ್ಲೆಯ ಖಾರಿ ಕರ್ಮರಾ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿಶಸ್ತ್ರಸಜ್ಜಿತ ಉಗ್ರರ ಗುಂಪು ಒಳನುಸುಳಲು ಯತ್ನಿಸಿದ್ದು ಅದನ್ನು ಯೋಧರು ವಿಫಲಗೊಳಿಸಿದ್ದಾರೆ.
ಉಗ್ರರು ಒಳನುಸುಳಲು ಯತ್ನಿಸುತ್ತಿದ್ದಂತೆ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ರಾತ್ರಿ ಹಲವು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ಸ್ದಾರೆ.
ಕಾರ್ಯಾಚರಣೆ ಸಂದರ್ಭದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.