ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.
ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.