ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಜೆಎಂಎಂ ಮಿತ್ರಪಕ್ಷಗಳು 56 ಸ್ಥಾನಗಳನ್ನು ಗೆದ್ದಿವೆ. ಬಿಜೆಪಿ ಮಿತ್ರಪಕ್ಷಗಳು 24 ಸ್ಥಾನಗಳನ್ನು ಗೆದ್ದುಕೊಂಡು ಪ್ರತಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಂದು ಸ್ಥಾನ ಇತರರ ಪಾಲಾಗಿದೆ.
ಪ್ರಸ್ತುತ 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಇಂಡಿಯ ಬ್ಲಾಕ್ ಸರ್ಕಾರ ರಚಿಸಲಿದೆ.