ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟಿನ ಧಾರವಾಡ ಏಕಸದಸ್ಯ ಪೀಠವು ಎಫ್ಐಆರ್ ರದ್ದು ಮಾಡಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಹೈಕೋರ್ಟಿನ ಈ ಕ್ರಮವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಇದು ನ್ಯಾಯಕ್ಕೆ ಸಂದ ಜಯ ಎಂದು ಅವರು ತಿಳಿಸಿದ್ದಾರೆ. ಮಾನ್ಯ ಜೆ.ಪಿ.ನಡ್ಡಾ ಅವರ ಪರವಾಗಿ ವಾದ ಮಂಡಿಸಿದ ವಕೀಲರು ಹೈಕೋರ್ಟಿನ ಈ ಕ್ರಮವನ್ನು ಸ್ವಾಗತಿಸಿ ಸಂಭ್ರಮ ವ್ಯಕ್ತಪಡಿಸಿದರು.