ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ.
ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ ಎನ್ನಲಾಗಿದೆ.

2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಇದೀಗ ರಾಮ್ ಗೋಪಾಲ್ ವರ್ಮಾವಿರುದ್ಧ ಕೋರ್ಟ್ ತೀರ್ಪು ಪ್ರಕಟಿಸಿದೆ. ಜ.21ರಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ದೂರುದಾರರಿಗೆ ಮೂರು ತಿಂಗಳಲ್ಲಿ 3.72 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೊತ್ತ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಘಟನೆ ಏನು?

Related posts