ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಮಹಿಳೆಯೊಬ್ಬರು ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಟಿಎಂಸಿ ಗಂಭೀರ ಆರೋಪ ಮಾಡಿದೆ.
ಟಿಎಂಸಿ ಮಾಜಿ ಸಂಸದ ಸಾಕೇತ್ ಗೋಖಲೆ ಈ ಕುರಿತು ಪ್ರತಿಕ್ರಿಯಿಸಿ, ಘಟನೆಯ ಹಿಂದೆ ಪಿತೂರಿ ಇರುವ ಸಾಧ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. Z+ ಭದ್ರತೆ ಹೊಂದಿರುವ ಮಮತಾ ಬ್ಯಾನರ್ಜಿ ಅವರ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಟಿಎಂಸಿ ಹೇಳಿಕೆಯ ಪ್ರಕಾರ, ತನ್ನಿಷ್ಠ ಸಹಾ ಎಂಬ ಮಹಿಳೆ ಮಮತಾ ಬ್ಯಾನರ್ಜಿ ಅವರ ಸೊಸೆ ಎಂದು ಪರಿಚಯಿಸಿಕೊಂಡು ನಿವಾಸದ ಬಳಿ ಬಂದಿದ್ದರು. ಬಳಿಕ ಅವಾಚ್ಯವಾಗಿ ನಿಂದಿಸಿ, ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಪಕ್ಷ ಆರೋಪಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು ಟಿಎಂಸಿ ತಿಳಿಸಿದೆ.

