ಒರೆಮ್ (ಉತಾಹ್): ಅಮೆರಿಕದಲ್ಲಿ ಯುವ ರಿಪಬ್ಲಿಕನ್‌ರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಪ್ರದಾಯವಾದಿ ಕಾರ್ಯಕರ್ತ ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ (31) ಆಗಂತುಕರ ಗುಂಡಿಗೆ ಬಲಿಯಾಗಿದ್ದಾರೆ.
ಭಾರತೀಯ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಉತಾಹ್‌ನ ಒರೆಮ್‌ನ ಕಾಲೇಜೊಂದರ ಕಾರ್ಯಕ್ರಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ.
ಈ ಘಟನೆ ಅಮೆರಿಕದಲ್ಲಿ ಆತಂಕ ಸೃಷ್ಟಿಸಿದೆ. ಪದೇಪದೆ ಇಂತಹ ದಾಳಿ ನಡೆಯುತ್ತಿರುವುದು ದುರದೃಷ್ಟಕರ ಎಂದು ನಾಯಕರು ಹೇಳಿದ್ದಾರೆ.
“ಇದು ನಮ್ಮ ರಾಜ್ಯಕ್ಕೂ ರಾಷ್ಟ್ರಕ್ಕೂ ಕಪ್ಪು ದಿನ. ನಿಜಕ್ಕೂ ರಾಜಕೀಯ ದುರುದ್ದೇಶಪೂರಿತ ಹತ್ಯೆ” ಎಂದು ಉತಾಹ್ ಗವರ್ನರ್ ಸ್ಪೆನ್ಸರ್ ಕಾಕ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ. ಆರಂಭದಲ್ಲಿ ಒಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು FBI ನಿರ್ದೇಶಕ ಕಾಶ್ ಪಟೇಲ್ ತಿಳಿಸಿದ್ದಾರೆ. ಆದರೆ ವಿಚಾರಣೆ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದ್ದು, ಘಟನೆಯೂ ನಿಗೂಢತೆಗೆ ಕಾರಣವಾಗಿದೆ.