ಡಿಕೆಶಿ ವಿರುದ್ದದ ಸಿಬಿಐ ತನಿಖೆಯ ಆದೇಶ ಹಿಂಪಡೆಯುವ ತೀರ್ಮಾನ ಕಾನೂನು ಬಾಹಿರ; ಅಶೋಕ್

ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷ ನಾಯಕರ ನಡುವೆ ವಾಗ್ದಾಳಿ ಆರಂಭವಾಗಿದೆ.

ಸಂಪುಟ ಸಭೆಯಲ್ಲಿನ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಇದು ಕಾನೂನುಬಾಹಿರ ಕ್ರಮ ಎಂದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅಶೋಕ್, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ ಎಂದಿದ್ದಾರೆ.

 

Related posts