ದೆಹಲಿ: ಪಂಚ ರಾಜ್ಯಗಳ ಚುನಾವಣೆ ಬೆನ್ನಲ್ಲೇ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಿದ್ದತೆ ನಡೆದಿದೆ. ಡಿಸೆಂಬರ್ 4 ರಿಂದ 22 ರವೆರೆಗೆ ಅಧಿವೇಶನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 3 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿವೇಶನ ಪ್ರಾರಂಭವಾಗಲಿವೆ. ಇದಕ್ಕೆ ಪೂರ್ವಭಾವಿಯಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.
ಈ ನಡುವೆ, ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗುವ ಸಾಧ್ಯತೆಗಳಿವೆ.