ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಮೈಸೂರು: ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ. ಇದೇ ಸಿದ್ದರಾಮಯ್ಯನವರ ಕೊಡುಗೆ ಎಂದರು.

Related posts