ಚೆನ್ನೈ: ತಮಿಳುನಾಡಿನ ರಾಣಿಪೇಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕೋಲಾರ ಮೂಲದವರು ಎನ್ನಲಾಗಿದೆ. ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ ಸುಮಾರು 50 ಮಂದಿ ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿ ವಾಪಸಾಗುತ್ತಿದ್ದರು.
ಮಾರ್ಗ ಮಧ್ಯೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹಲವಾರು ಗಾಯಗೊಂಡಿದ್ದು ಅವರನ್ನು ವೇಲೂರು ಹಾಗೂ ರತ್ನಗಿರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ಫ್ ಎಂದು ಮೂಲಗಳು ತಿಳಿಸಿವೆ.