ತಿರುಪತಿ: ಗೇಟ್‌ ತೆರೆದ ತಕ್ಷಣ ಎಲ್ಲರೂ ಮುನ್ನುಗ್ಗಿದ್ದರಿಂದ ಕಾಲ್ತುಳಿತ

ತಿರುಪತಿ: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ದೇಗುಲ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನಪ್ಪಿದ್ದಾರೆ. ಜನವರಿ 10 ರಂದು ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ತಿರುಪತಿ ಕ್ಷೇತ್ರದಲ್ಲಿ ವಿಶೇಷ ಮಹೋತ್ಸವ ಏರ್ಪಾಡಾಗಿದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದಕ್ಕಾಗಿ ಟಿಕೆಟ್‌ ತೆಗೆದುಕೊಳ್ಳುವ ವೇಳೆ ಕಾಲ್ತುಳಿತ ಸಂಭವಿಸಿದೆ.

ಬುಧವಾರ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ ತೆಗೆದುಕೊಳ್ಳುವ ಸಂಬಂಧ ಭಾರೀ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಆ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸಾವನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಅಧ್ಯಕ್ಷ ಬಿಆರ್ ನಾಯ್ಡು, ಗೇಟ್‌ಗಳನ್ನು ತೆರೆದ ತಕ್ಷಣ ಎಲ್ಲರೂ ಮುನ್ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಎಂದು ತಿಳಿಸಿದ್ದಾರೆ.

Related posts