ಚೆನ್ನೈ: ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನವನ್ನು ಹೆಚ್ಚಿಸಬೇಕೆಂದು ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಒತ್ತಾಯಿಸಿದೆ. ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಸಮಾಧಾನ ಹೊರಹಾಕಿದ್ದಾರೆ.
16ನೇ ಹಣಕಾಸು ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ತೆರಿಗೆಯ ಶೇ.50 ಪಾಲನ್ನು ತಮ್ಮ ರಾಜ್ಯಕ್ಕೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.
ದೇಶದಲ್ಲಿ ಗಮನಾರ್ಹ ಅಭಿವೃದ್ಧಿ ಕೈಗೊಂಡಿರುವ ತಮಿಳುನಾಡಿನಂಥ ರಾಜ್ಯಗಳಿಗೆ ಹೆಚ್ಚುವರಿ ಅನುದಾನವನ್ನು ಹಂಚಿಕೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.