ತೆಲಂಗಾಣ ಕದನ: 119 ಅಸೆಂಬ್ಲಿ ಸ್ಥಾನಗಳ ಪೈಕಿ 70 ಸ್ಥಾನಗಳಿಗೆ ಕಾಂಗ್ರೆಸ್ ಚೌಕಾಸಿ

ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ತೆಲಂಗಾಣ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ. ರೇವಂತ್ ರೆಡ್ಡಿ, ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಕೆ. ಮುರಳೀಧರನ್, ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಇತರ ಹಿರಿಯ ನಾಯಕರು ಸುದೀರ್ಘ ರಣತಂತ್ರ ನಡೆಸಿದರು. ತೆಲಂಗಾಣದ 119 ವಿಧಾನಸಭಾ ಸ್ಥಾನಗಳ ಪೈಕಿ 70 ಸ್ಥಾನಗಳ ಮೇಲೆ ಈ ನಾಯಕರು ಗಮನ ಕೇಂದ್ರೀಕರಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಹಿರಿಯ ನಾಯಕರ ನಡುವೆ ಕನಿಷ್ಠ ಮೂರು ಗಂಟೆಗಳ ಕಾಲ ಚರ್ಚೆನಡೆಯಿತು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ನಾಯಕ ಕೆ.ಮುರಳೀಧರನ್, “ನಾವು 119 ರಲ್ಲಿ 70 ಸ್ಥಾನಗಳ ಬಗ್ಗೆ ಚರ್ಚಿಸಿದ್ದೇವೆ ಮತ್ತು ಎಲ್ಲಾ ಸ್ಥಾನಗಳನ್ನು ಅಂತಿಮಗೊಳಿಸಲು ಹೆಚ್ಚಿನ ಚರ್ಚೆ ಅಗತ್ಯವಿದೆ” ಎಂದು ಪ್ರಸ್ತಾಪಿಸಿದರು. ಕಾಂಗ್ರೆಸ್ ಪಕ್ಷವು ಒಂದೇ ಬಾರಿಗೆ ಸಂಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ಸೂಚಿಸಿದರು.

ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಹಾಗೂ ಆಡಳಿತ ಪಕ್ಷ ಬಿಆರ್‌ಎಸ್ ಅನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಕ್ರಿಯವಾಗಿ ಸಿದ್ಧತೆ ನಡೆಸಿದೆ. ತಮ್ಮ ಪ್ರಚಾರವನ್ನು ಪ್ರಾರಂಭಿಸಲು, ಪಕ್ಷವು ಅಕ್ಟೋಬರ್ 18 ರಿಂದ ರಾಜ್ಯದಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ಯೋಜಿಸಿದೆ, ಅಕ್ಟೋಬರ್ 18 ರಿಂದ ಅಕ್ಟೋಬರ್ 20 ರವರೆಗೆ ಸತತ ಮೂರು ದಿನಗಳವರೆಗೆ ರಾಹುಲ್ ಗಾಂಧಿ ಸೇರಲಿದ್ದಾರೆ ಎಂದವರು ತಿಳಿಸಿದರು.

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

Related posts