ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯಗಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅಕ್ಟೋಬರ್ 21 ರಂದು ಮತದಾನ ನಡೆದಿತ್ತು. 5,906 ಮತದಾರರು ಮತ ಚಲಾಯಿಸಿದ್ದರು. ಗುರುವಾರ ಬೆಳಿಗ್ಗೆ ಮತ ಎಣಿಕೆ ನಡೆದಿದೆ.
ಬಿಜೆಪಿಯಿಂದ ಕಿಶೋರ್ ಕುಮಾರ್, ಕಾಂಗ್ರೆಸ್ನಿಂದ ರಾಜು ಪೂಜಾರಿ, ಎಸ್ಡಿಪಿಐನಿಂದ ಅನ್ವರ್ ಸಾದತ್ ಮತ್ತು ಸ್ವತಂತ್ರ ಅಭ್ಯರ್ಥಿ ದಿನಕರ ಉಳ್ಳಾಲ್ ನಡುವೆ ಸ್ಪರ್ದೆ ಏರ್ಪಟ್ಟಿತ್ತು.
ಕಿಶೋರ್ ಕುಮಾರ್ ಅವರು 1600ಕ್ಕೂ ಅಧಿಕ ಮತಗಳಿಂದ ಅವರು ಜಯ ಸಾಧಿಸುವ ಮೂಲಕ ಪರಿಷತ್ ಸದಸ್ಯತ್ವವನ್ನು ಬಿಜೆಪಿ ಉಳಿಸಿಕೊಂಡಿದೆ.