ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಅವರು ರಾಜೀನಾಮೆ

ವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಲನುಭವಿಸಿದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಅತಿಶಿ ಅವರು ರಾಜೀನಾಮೆ ನೀಡಿದ್ದಾರೆ.

ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಅತಿಶಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಕಲ್ಕಾಜಿ ಕ್ಷೇತ್ರದಲ್ಲಿ ಅತಿಶಿ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಅವರ ಪಕ್ಷ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ಸಾಧನೆ ಮಾಡಿದೆ.

Related posts