ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ನಸುಕಿನ ಜಾವ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಸೋಮವಾರ ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದ್ದು ನಿದ್ದೆಯಲ್ಲಿದ್ದವರೂ ಎಚ್ಚರಗೊಂಡು ಏಕಾಏಕಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

Related posts