ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ.
ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸಹಿತ ಬಹುತೇಕ ರಾಜ್ಯಗಳಲ್ಲಿ ಆಸ್ಪತ್ರೆಯ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ.
ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ನಡೆಯುತ್ತಿದ್ದು ಭಾನುವಾರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ವೈದ್ಯರ ಸಂಘದ ಮುಖಂಡರು ತಿಳಿಸಿದ್ದಾರೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮುಂದಾಳುತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಈ ಹೋರಾಟ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.
ಈ ನಡುವೆ ವೈದ್ಯರ ಮುಷ್ಕರದಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳು ಪರದಾಡುವಂತಾಗಿದೆ.