ಧರ್ಮಸ್ಥಳ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಗೆ ವಕೀಲರ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಬಳಿಯ ಅತ್ಯಾಚಾರ-ಕೊಲೆ ಸರಣಿ ಪ್ರಕರಣಗಳು ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.

ಸಿಎಂ ನಿವಾಸ ‘ಕಾವೇರಿ’ಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಕೀಲರ ತಂಡ, ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಯಬೇಕೆಂದು ಒತ್ತಾಯಿಸಿತು. ವಿಚಾರಣಾ ಪ್ರಕ್ರಿಯೆ ಸಂಪೂರ್ಣವಾಗಿ ವಿಡಿಯೋ ದಾಖಲಾತಿಯಾಗಿ ಮಾಡಬೇಕು ಎಂದು ಅವರು ಮನವಿ ಸಲ್ಲಿಸಿದರು.

ವಕೀಲರಾದ ಸಿ.ಎಸ್. ದ್ವಾರಕನಾಥ್, ಎಸ್. ಬಾಲನ್ ಮತ್ತು ಉಮಾಪತಿ ಎಸ್ ಸಹಿತ ನಿಯೋಗ ಮುಖ್ಯಮಂತ್ರಿಗೆ ಈ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Related posts