ಮೈಸೂರು: ನಂಜನಗೂಡು ತಾಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಗೋದಾಮೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಬುಧವಾರ ಕೆಮಿಕಲ್ ಪದಾರ್ಥಗಳ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ.
ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರದಲ್ಲಿ ಅನಿಲ ಸಂಗ್ರಹಣಾ ಘಟಕದ ಸಮೀಪ ಗೋದಾಮು ಬಳಿ ಮೈಸೂರು ಮೂಲದ ವ್ಯಕ್ತಿ ಕೆಮಿಕಲ್ ಮಿಶ್ರಿತ ಹಳೆ ಟ್ಯಾಂಕರ್ ಮತ್ತು ಇತರೆ ಪದಾರ್ಥಗಳನ್ನು ಸಂಗ್ರಹಿಸಿಟ್ಟಿದ್ದರೆನ್ನಲಾಗಿದೆ. ಈ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅನಾಹುತ ಸಂದರ್ಭದಲ್ಲಿ ಸ್ಪೋಟದ ರೀತಿ ಶಬ್ಧ ಕೇಳಿಬಂದಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಈಶರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.