ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದಾಗಿಲ್ಲ; MEA ಸ್ಪಷ್ಟನೆ

ನವದೆಹಲಿ: ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ ಕುರಿತಂತೆ ಕೇಂದ್ರ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ (MEA) . ಯಮೆನ್ ಗಲ್ಲು ಶಿಕ್ಷೆಯನ್ನು ಮುಂದೂಡಿದೆ, ಆದರೆ ರದ್ದುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ. ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.

Related posts