ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ; 40ಕ್ಕೂ ಹೆಚ್ಚು ಮಂದಿ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ಉಂಟಾಗಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹತೋಟಿಗೆ ತರಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಉಂಟಾದ ಕಲಹ ಗುಂಪುಘರ್ಷಣೆಗೆ ತಿರುಗಿದ್ದು, ಉದ್ರಿಕ್ತರು ಅಸ್ತಿ-ಪಾಸ್ತಿ ಹಾನಿಗೊಳಿಸಿದ್ದಾರೆನ್ನಗಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಕಾರ್ಯಾಚರಣೆ ಕೈಗೊಂಡಿಸಿರುವ ಪೊಲೀಸರು ಈ ವರೆಗೂ 46 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಚೆಲುವರಾಯಸ್ವಾಮಿ, ಘಟನೆ ತಿಳಿದ ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ, ವರದಿ ಪಡೆದಿದ್ದೇನೆ. ಎಲ್ಲಾ ತಪ್ಪಿತಸ್ಥರ ಬಂಧನಕ್ಕೆ ಸೂಚಿಸಿದ್ದು ಶಾಂತಿ‌ ಮರುಸ್ಥಾಪನೆಗೆ ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Related posts