ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದಿದ್ದು ತಮ್ಮ ವಿರುದ್ದದ ಆರೋಪಗಳನ್ನು ಅಲ್ಲಗಳೆದಿದ್ದಾರೆ.
ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರನ್ಯಾರಾವ್, ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
‘ಈ ಪ್ರಕರಣದಲ್ಲಿ ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರನ್ಯಾ ರಾವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹೇಳಿದ್ದಾರೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ನಾಲ್ಕು ಪುಟಗಳ ಪತ್ರದಲ್ಲಿ ಬರೆದುಕೊಂಡಿದ್ದಾರೆ.
ಬಂಧನವಾದಾಗಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವವರೆಗೆ ಸುಮಾರು 10-15 ಬಾರಿ ತನ್ನ ಮುಖಕ್ಕೆ ಡಿಆರ್ ಐ ಅಧಿಕಾರಿಗಳು ಹೊಡೆದಿದ್ದಾರೆ. ಹಲ್ಲೆ ನಡೆಸಿ ಒತ್ತಡದಲ್ಲಿ ಸಿಲುಕಿಸಿ ಹಲವು ದಾಖಲೆಗಳಿಗೆ ಹಾಗೂ ಸುಮಾರು 40 ಪುಟಗಳಷ್ಟು ಖಾಲಿ ಕಾಗದದ ಮೇಲೆ ಸಹಿ ಮಾಡಿಸಿದ್ದಾರೆ. ನನ್ನನ್ನು ಹಸಿವಿನಿಂದ ನರಳಿಸಿದ್ದಲ್ಲದೆ ನಿದ್ರೆ ಮಾಡಲೂ ಬಿಡಲಿಲ್ಲ ಎಂದು ರನ್ಯಾ ರಾವ್ ಡಿಆರ್‌ಐ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ ಎನ್ನಲಾಗಿದೆ.