ನೆಲ್ಲೂರಿನಲ್ಲಿ ಭೀಕರ ಅಪಘಾತ: ಆರು ಮಂದಿ ದುರ್ಮರಣ

ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸಂಗಮ್‌ ಮಂಡಲದ ಪೆರಮನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮರಳು ತುಂಬಿಕೊಂಡಿದ್ದ ಟಿಪ್ಪರ್‌ ಲಾರಿ, ಕಾರಿಗೆ ಡಿಕ್ಕಿ ಹೊಡೆದ ಬಳಿಕ ಕೆಲ ಅಂತರವರೆಗೆ ಎಳೆದೊಯ್ದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಒಂದು ಮಗು ಸೇರಿ ಒಟ್ಟು ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Related posts